Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್) 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪ್ರತಿಯೊಬ್ಬರಿಗೂ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕೇಳಿ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಪ್ರತಿ ಮೃತರ ಸನಿಹದ ಸಂಬಂಧಿಕರಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್) 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಪ್ರತಿ ಗಾಯಾಳುಗಳಿಗೂ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****