Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಮೃತರ ಪ್ರತಿ ಕುಟುಂಬಕ್ಕೆ ಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

”ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಮೃತರ ಪ್ರತಿಯೊಬ್ಬ ಕುಟುಂಬಕ್ಕೂ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****