ಪಿಎಂಇಂಡಿಯಾ
ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಅಧಿಕಾರಾವಧಿಗೆ ಶುಭ ಕೋರಿದ್ದಾರೆ.
ಜನರ ಕಲ್ಯಾಣಕ್ಕಾಗಿ ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭ ಹಾರೈಕೆಗಳು. ಜನರ ಕಲ್ಯಾಣಕ್ಕಾಗಿ ಕರ್ನಾಟಕ ಸರ್ಕಾರದೊಂದಿಗೆ ಕೇಂದ್ರವು ನಿಕಟವಾಗಿ ಕಾರ್ಯನಿರ್ವಹಿಸಲಿದೆ.
@DKShivakumar”
*****
Congratulations to Shri DK Shivakumar Ji on taking oath as Chief Minister of Karnataka. Best wishes for his tenure. The Centre will work closely with the Karnataka Government for the welfare of the people.@DKShivakumar
— Narendra Modi (@narendramodi) June 3, 2026