ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಲ್ಪಕಂನ ದೇಸೀಯವಾಗಿ ಅಭಿವೃದ್ಧಿಪಡಿಸಿರುವ ಪ್ರೋಟೊಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (Prototype Fast Breeder Reactor) – PFBR ನಿರ್ಣಾಯಕ ಹಂತ ತಲುಪಿರುವ ಹಿನ್ನೆಲೆಯಲ್ಲಿ ಅವರು, ಭಾರತದ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ತನ್ನ ನಾಗರಿಕ ಅಣುಇಂಧನ ಪಯಣದಲ್ಲಿ ನಿರ್ಣಾಯಕ ಘಟ್ಟ ತಲುಪಿದೆ. ಆ ಮೂಲಕ ಎರಡನೇ ಹಂತದ ಅಣು ಇಂಧನ ಕಾರ್ಯಕ್ರಮದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಅತ್ಯಾಧುನಿಕ ರಿಯಾಕ್ಟರ್ ತಾನು ಬಳಸಿಕೊಳ್ಳುವ ಇಂಧನಕ್ಕಿಂತ ಹೆಚ್ಚಿನ ಇಂಧನವನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇದು ಭಾರತದ ವೈಜ್ಞಾನಿಕ ಸಾಮರ್ಥ್ಯ ಮತ್ತು ಶ್ರೇಷ್ಠ ಇಂಜಿನಿಯರಿಂಗ್ ವಲಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿರುವ ವ್ಯಾಪಕ ಥೋರಿಯಂ ನಿಕ್ಷೇಪಗಳನ್ನು ಮೂರನೇ ಹಂತದ ಅಣು ಇಂಧನ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುವಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಈ ಸಾಧನೆ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಶ್ಲಾಘಿಸಿರುವ ಪ್ರಧಾನಮಂತ್ರಿ ಅವರು, ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲರ ಪ್ರಯತ್ನ ಮತ್ತು ಬದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಇಂದು ಭಾರತದ ನಾಗರಿಕ ಅಣು ಇಂಧನ ಪಯಣದಲ್ಲಿ ನಿರ್ಣಾಯಕ ಹೆಜ್ಜೆಯಾಗಿದ್ದು, ತನ್ನ ಅಣು ಇಂಧನ ಕಾರ್ಯಕ್ರಮದ ಎರಡನೇ ಹಂತಕ್ಕೆ ಪದಾರ್ಪಣೆ ಮಾಡಿದೆ.
ದೇಸೀಯವಾಗಿ ನಿರ್ಮಿಸಿ, ವಿನ್ಯಾಸಗೊಳಿಸಿರುವ ಕಲ್ಪಕಂನ ಪ್ರೋಟೊಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ ನಿರ್ಣಾಯಕ ಹಂತ ತಲುಪಿದೆ.
ಅತ್ಯಾಧುನಿಕ ರಿಯಾಕ್ಟರ್ ತಾನು ಬಳಸಿಕೊಳ್ಳುವ ಇಂಧನಕ್ಕಿಂತ ಹೆಚ್ಚಿನ ಇಂಧನವನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಆ ಮೂಲಕ ಭಾರತದ ವೈಜ್ಞಾನಿಕ ಸಾಮರ್ಥ್ಯ ಮತ್ತು ಶ್ರೇಷ್ಠ ಇಂಜಿನಿಯರಿಂಗ್ ವಲಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಭಾರತದಲ್ಲಿರುವ ವ್ಯಾಪಕ ಥೋರಿಯಂ ನಿಕ್ಷೇಪಗಳನ್ನು ಮೂರನೇ ಹಂತದ ಅಣು ಇಂಧನ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುವಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ.
ಭಾರತಕ್ಕೆ ಇದು ಹೆಮ್ಮೆಯ ಕ್ಷಣವಾಗಿದ್ದು, ನಮ್ಮ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳಿಗೆ ಅಭಿನಂದನೆಗಳು.”
*****
Today, India takes a defining step in its civil nuclear journey, advancing the second stage of its nuclear programme.
— Narendra Modi (@narendramodi) April 6, 2026
The indigenously designed and built Prototype Fast Breeder Reactor at Kalpakkam has attained criticality.
This advanced reactor, capable of producing more fuel…