ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಕಾನೂನು ಮತ್ತು ಶಾಸನ ರಚನೆಯಲ್ಲಿನ ತನ್ನ ಅನುಭವ ಮತ್ತು ಪರಿಣತಿಯನ್ನು ಹಂಚಿಕೊಳ್ಳುವ ಸಂಬಂಧ ಕಾನೂನು ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಮೊರಾಕ್ಕೊ ನಡುವೆ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಪೂರ್ವಾನ್ವಯ ಒಪ್ಪಿಗೆ ನೀಡಿದೆ.
ಈ ತಿಳಿವಳಿಕೆ ಒಪ್ಪಂದವು ಭಾರತ ಮತ್ತು ಮೊರಾಕ್ಕೊ ಪ್ರಾಧಿಕಾರಗಳು ಆಯೋಜಿಸುವ ವಿಚಾರಸಂಕಿರಣ, ವಿಚಾರಗೋಷ್ಠಿ ಮತ್ತು ಕಾರ್ಯಾಗಾರಗಳಲ್ಲಿ ಕಾನೂನು ಮತ್ತು ನ್ಯಾಯ ಕ್ಷೇತ್ರದಲ್ಲಿನ ವಿಷಯಗಳ ಬಗ್ಗೆ ಚರ್ಚಿಸಲು ವಕೀಲರು, ಕಾನೂನು ಅಧಿಕಾರಿಗಳು ಮತ್ತು ಕಾನೂನು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆ.
***