Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೃಷಿ ಮತ್ತು ಪೂರಕ ಕ್ಷೇತ್ರಗಳಲ್ಲಿನ ಸಹಕಾರಕ್ಕಾಗಿ ಸಂಯುಕ್ತ ಅರಬ್ ಎಮಿರೇಟ್ಸ್ ಮತ್ತು ಭಾರತ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಸಮ್ಮತ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಸಂಯುಕ್ತ ಅರಬ್ ಎಮಿರೇಟ್ಸ್ ನಡುವೆ ಕೃಷಿ ಮತ್ತು ಅದಕ್ಕೆ ಪೂರಕವಾದ ಕ್ಷೇತ್ರಗಳಲ್ಲಿ ಸಹಕಾರ(ಎಂ.ಓ.ಯು)ಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದವು ಎರಡೂ ರಾಷ್ಟ್ರಗಳಿಗೆ ಪರಸ್ಪರ ಲಾಭದಾಯಕವಾಗಿದೆ. ಇದು ಎರಡೂ ರಾಷ್ಟ್ರಗಳಲ್ಲಿನ ಉತ್ತಮ ಕೃಷಿ ಪದ್ಧತಿಗಳನ್ನು ಅರ್ಥ ಮಾಡಿಕೊಳ್ಳಲು ಉತ್ತೇಜನ ನೀಡುತ್ತದೆ ಮತ್ತು ರೈತರ ಕ್ಷೇತ್ರಗಳಲ್ಲಿ ಉತ್ತಮ ಇಳುವರಿಗೆ ನೆರವಾಗುತ್ತದೆ ಜೊತೆಗೆ ನ್ಯಾಯಯುತ ಮತ್ತು ಸಮಗ್ರತೆಗೆ ದಾರಿ ಮಾಡಿಕೊಡುವ ಸುಧಾರಿತ ಜಾಗತಿಕ ಮಾರುಕಟ್ಟೆಯ ಪ್ರವೇಶಕ್ಕೆ ಅವಕಾಶ ಕಲ್ಪಿಸುತ್ತದೆ. ಕೃಷಿ ತಂತ್ರಜ್ಞಾನದಲ್ಲಿನ ಸಹಕಾರವು ಆಹಾರ ಭದ್ರತೆಯನ್ನು ಬಲಪಡಿಸಲು ಅನುವಾಗುವಂಥ ಇಳುವರಿ ಮತ್ತು ಉತ್ಪಾದನೆ ಹೆಚ್ಚಿಸುವ ನಾವಿನ್ಯದ ತಂತ್ರಗಾರಿಕೆಗೆ ದಾರಿ ಮಾಡಿಕೊಡುತ್ತದೆ.

*****