Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇಂದ್ರದ ಮಾಜಿ ಸಚಿವ ಹಾಗೂ ಸಂಸತ್ ಸದಸ್ಯ ಶ್ರೀ ಸನ್ವಾರ್ ಲಾಲ್ ಜಾಟ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಸಂಸತ್ ಸದಸ್ಯ ಶ್ರೀ ಸನ್ವಾರ್ ಲಾಲ್ ಜಾಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಕೇಂದ್ರದ ಮಾಜಿ ಸಚಿವ ಹಾಗೂ ಸಂಸತ್ ಸದಸ್ಯ ಶ್ರೀ ಸನ್ವಾರ್ ಲಾಲ್ ಜಾಟ್ ನಿಧನದಿಂದ ದುಃಖಿತನಾಗಿದ್ದೇನೆ. ಇದು ಬಿಜೆಪಿಗೆ ಮತ್ತು ದೇಶಕ್ಕೆ ದೊಡ್ಡ ನಷ್ಟ. ನನ್ನ ಸಂತಾಪಗಳು.

ಶ್ರೀ ಸನ್ವಾರ್ ಲಾಲ್ ಜಾಟ್ ಅವರು ರೈತರ ಮತ್ತು ಗ್ರಾಮಗಳ ಒಳಿತಿಗಾಗಿ ಶ್ರಮಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/AK