ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಈ ಕೆಳಗಿನ ಅಧಿಕಾರಿಗಳ ನಿವೃತ್ತಿಯ ವಯಸ್ಸನ್ನು ಹೆಚ್ಚಳಕ್ಕೆ ಸಂಬಂಧಿಸಿದಂತೆ ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ.
(i) ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್ ನ ಸಾಮಾನ್ಯ ಸೇವೆಯ ವೈದ್ಯಾಧಿಕಾರಿಗಳಿಗೆ 60ರಿಂದ 65 ವರ್ಷಗಳು, ಮತ್ತು
(ii) ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್ ನ ತಜ್ಞ ವೈದ್ಯಾಧಿಕಾರಿಗಳಿಗೆ 60ರಿಂದ 65 ವರ್ಷಗಳು.
ಇದು ತಜ್ಞ ಮತ್ತು ಸಾಮಾನ್ಯ ಸೇವೆಗಳ ವೈದ್ಯಕೀಯ ಶ್ರೇಣಿಯಲ್ಲಿನ ಅಧಿಕಾರಿಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಇದರಿಂದಾಗಿ ರೋಗಿಗಳ ಉತ್ತಮ ಆರೋಗ್ಯ ಆರೈಕೆ ಸೇವೆ, ವೈದ್ಯಕೀಯ ಕಾಲೇಜುಗಳಲ್ಲಿ ಸೂಕ್ತವಾದ ಶೈಕ್ಷಣಿಕ ಚಟುವಟಿಕೆಗಳು ನಡೆಯಲು ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಸಹಕಾರಿಯಾಗಲಿದೆ.
****
AKT/VBA