Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇರಳದ ತ್ರಿಶೂರ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳ ರಾಜ್ಯದ ತ್ರಿಶೂರ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಬೇಕೆಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಮೃತರ ಪ್ರತಿ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

”ಕೇರಳದ ತ್ರಿಶೂರ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi”

”ಮೃತರ ಎಲ್ಲಾ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ.ಪರಿಹಾರ ನೀಡಲಾಗುವುದು.’’

“തൃശൂരിലെ പടക്ക നിർമാണശാലയിലുണ്ടായ അപകടത്തിൽ നിരവധി ജീവനുകൾ പൊലിഞ്ഞ വാർത്തയറിഞ്ഞതിൽ ദുഃഖമുണ്ട്. പ്രിയപ്പെട്ടവരെ നഷ്ടപ്പെട്ടവരുടെ വേദനയിൽ പങ്കുചേരുന്നു. പരിക്കേറ്റവർ എത്രയും വേഗം സുഖം പ്രാപിക്കട്ടെ: പ്രധാനമന്ത്രി

@narendramodi.”

“മരിച്ച ഓരോ വ്യക്തിയുടെയും കുടുംബത്തിന് പ്രധാനമന്ത്രിയുടെ ദേശീയ ദുരിതാശ്വാസ നിധിയിൽ (PMNRF) നിന്ന് 2 ലക്ഷം രൂപ ധനസഹായം നൽകുമെന്ന് പ്രധാനമന്ത്രി അറിയിച്ചു. പരിക്കേറ്റവർക്ക് 50,000 രൂപ വീതം നൽകും.”

 

*****