ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳ ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಅಲ್ಲಿನ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದರು.
“ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ನಾವು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದೇವೆ. ರಕ್ಷಣಾ ಸಚಿವಾಲಯಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚಿಸಿದ್ದೇವೆ. ಕೇರಳದ ಜನರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ”, ಪ್ರಧಾನಿ ಹೇಳಿದ್ದಾರೆ.
***
Spoke to Kerala CM Shri Pinarayi Vijayan again this morning. We discussed the flood situation in the state. Have asked Defence Ministry to further step up the rescue and relief operations across the state. Praying for the safety and well-being of the people of Kerala. @CMOKerala
— Narendra Modi (@narendramodi) August 16, 2018