Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೋಕ್ರಜಾರ್ ನಲ್ಲಿ ನಡೆದ ದಾಳಿಯನ್ನು ಕಟುವಾಗಿ ಖಂಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂನ ಕೋಕ್ರಜಾರ್ ನಲ್ಲಿ ನಡೆದ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಕೋಕ್ರಾಜಾರ್ ದಾಳಿಯಿಂದ ದುಃಖಿತನಾಗಿದ್ದೇನೆ. ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನಮ್ಮ ಸಂವೇದನೆ ಇದೆ ಹಾಗೂ ಗಾಯಗೊಂಡವರೊಂದಿಗೆ ನಮ್ಮ ಪ್ರಾರ್ಥನೆ ಇದೆ.

ಗೃಹ ಸಚಿವಾಲಯವು ಅಸ್ಸಾಂ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.