Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಂದು ‘ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದರು. “ಈ ಸೇವೆಯು ಪ್ರೀತಿ, ಶಾಂತಿ ಮತ್ತು ಸಹಾನುಭೂತಿಯ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಸ್ಫೂರ್ತಿಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದೆನು. ಈ ಸೇವೆಯು ಪ್ರೀತಿ, ಶಾಂತಿ ಮತ್ತು ಅನುಕಂಪದ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸಿತು. ಕ್ರಿಸ್‌ಮಸ್‌ನ ಸ್ಫೂರ್ತಿಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ’’

“ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯ ಕೆಲವು ದೃಶ್ಯಗಳ ನೋಟ ಇಲ್ಲಿದೆ.’’

ಕ್ರಿಸ್‌ಮಸ್ ಭರವಸೆಯನ್ನು ನವೀಕರಿಸಲಿ,ಆತ್ಮೀಯ ಮತ್ತು ಅನುಕಂಪದ ಹಂಚಿಕೆಯ ಬದ್ಧತೆಯನ್ನು ತರಲಿ.

“ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯ ಪ್ರಮುಖ್ಯಾಂಶಗಳು ಇಲ್ಲಿವೆ.’’

 

*****