ಪಿಎಂಇಂಡಿಯಾ
ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನ ಮಂತ್ರಿಗಳು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವವರ ಕುಟುಂಬಸ್ಥರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡಿರುವವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi’’
*****
Saddened to hear about the loss of lives due to a mishap in Vadodara Rural, Gujarat. My thoughts are with those who have lost their loved ones. May the injured recover at the earliest: PM @narendramodi
— PMO India (@PMOIndia) June 17, 2026