Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುಜರಾತ್‌ನ ವಲ್ಸಾದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಗುಜರಾತ್‌ನ ವಲ್ಸಾದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ: PM @narendramodi”

 

*****