ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮೆ ಅಂಗವಾಗಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಶಿಕ್ಷಕರು ಜ್ಞಾನವನ್ನು ದಯಪಾಲಿಸುವ ಜೊತೆಗೆ ತಮ್ಮ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಶಕ್ತಿ ತುಂಬುತ್ತಾ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ರೂಪಿಸುತ್ತಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಗುರುಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಮಾರ್ಗದರ್ಶಕ ಶಕ್ತಿಯನ್ನಾಗಿಸಿಕೊಳ್ಳಬೇಕೆಂದು ಪ್ರಧಾನಮಂತ್ರಿ ಕರೆ ನೀಡಿದ್ದಾರೆ.
ಪ್ರಧಾನಮಂತ್ರಿಗಳು ಈ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ –
“प्रेरकः सूचकश्चैव वाचको दर्शकस्तथा।
शिक्षकः बोधकश्चैव षडेते गुरवः स्मृताः॥”
ಗುರುವು ಸರಿಯಾದ ಮಾರ್ಗ ತೋರುತ್ತಾ, ಜ್ಞಾನ ಮತ್ತು ಸತ್ಯವನ್ನು ತಿಳಿಸುತ್ತಾ, ಸನ್ಮಾರ್ಗದೆಡೆಗೆ ಕೊಂಡೊಯ್ಯುತ್ತಾ, ಶಿಕ್ಷಣವನ್ನು ನೀಡುತ್ತಾ ಜೀವನದಲ್ಲಿ ಸತ್ಯದ ತಿಳುವಳಿಕೆಯನ್ನು ಜಾಗೃತಗೊಳಿಸಿ ಸ್ವಯಂ-ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತಾನೆ. ಇವುಗಳನ್ನು ಗುರುವಿನ ಆರು ರೂಪಗಳೆಂದು ಪರಿಗಣಿಸಲಾಗಿದೆ ಎಂದು ಸುಭಾಷಿತ ತಿಳಿಸುತ್ತದೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“गुरु पूर्णिमा की सभी देशवासियों को बहुत-बहुत बधाई। गुरु ज्ञान के साथ ही अपने शिष्यों में सकारात्मक ऊर्जा का संचार कर उन्हें सुविचार और सुसंस्कारों से सुशिक्षित करते हैं। आइए, उनके आदर्शों को अपने जीवन का संबल बनाएं।
प्रेरकः सूचकश्चैव वाचको दर्शकस्तथा।
शिक्षकः बोधकश्चैव षडेते गुरवः स्मृताः॥”
*****
गुरु पूर्णिमा की सभी देशवासियों को बहुत-बहुत बधाई। गुरु ज्ञान के साथ ही अपने शिष्यों में सकारात्मक ऊर्जा का संचार कर उन्हें सुविचार और सुसंस्कारों से सुशिक्षित करते हैं। आइए, उनके आदर्शों को अपने जीवन का संबल बनाएं।
— Narendra Modi (@narendramodi) July 29, 2026
प्रेरकः सूचकश्चैव वाचको दर्शकस्तथा।
शिक्षकः बोधकश्चैव षडेते… pic.twitter.com/DejWzLPnda