ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಗೋವಾ ವಿಮೋಚನಾ ದಿನವು ಭಾರತದ ರಾಷ್ಟ್ರೀಯ ಪಯದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ. ಅನ್ಯಾಯವನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಧೈರ್ಯ ಮತ್ತು ದೃಢಸಂಕಲ್ಪದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಅದಮ್ಯ ಚೈತನ್ಯವನ್ನು ಅವರು ಸ್ಮರಿಸಿದ್ದಾರೆ. ಗೋವಾದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿರುವಾಗ ಅವರ ತ್ಯಾಗಗಳು ರಾಷ್ಟ್ರಕ್ಕೆ ಸದಾ ಪ್ರೇರಣಾದಾಯಕವಾಗಿದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;
”ಗೋವಾ ವಿಮೋಚನಾ ದಿನವು ನಮ್ಮ ರಾಷ್ಟ್ರದ ಪಯಣದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ನೆನಪು ಮಾಡುತ್ತದೆ. ಅನ್ಯಾಯವನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಧೈರ್ಯ ಮತ್ತು ದೃಢಸಂಕಲ್ಪದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಅದಮ್ಯ ಚೈತನ್ಯವನ್ನು ನಾವು ಸದಾ ಸ್ಮರಿಸಿಕೊಳ್ಳುತ್ತೇವೆ. ಗೋವಾದ ಸರ್ವತೋಮುಖ ಪ್ರಗತಿಗೆ ನಾವು ಕೆಲಸ ಮಾಡುತ್ತಿರುವಾಗ ಅವರ ತ್ಯಾಗಗಳು ನಮಗೆ ಸದಾ ಸ್ಫೂರ್ತಿ ನೀಡುತ್ತಲೇ ಇರುತ್ತವೆ’’.
*****