Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಚಂಡಮಾರುತದಿಂದಾಗಿ ತಮಿಳುನಾಡಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಚಂಡಮಾರುತದಿಂದ ತಮಿಳುನಾಡಲ್ಲಿ ಉಂಟಾದ ಜೀವಹಾನಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

“ತಮಿಳುನಾಡಿನ ಕೆಲವು ಭಾಗಗಳಲ್ಲಿ ಚಂಡಮಾರುತದ ಪರಿಸ್ಥಿತಿಯಿಂದಾಗಿ ಜೀವನಷ್ಟ ಅನುಭವಿಸಿದ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ. ಚಂಡಮಾರುತದ ಹಿನ್ನಲೆಯಲ್ಲಿ ಅಧಿಕಾರಿಗಳು ಸಾಧ್ಯವಾಗುವ ಎಲ್ಲಾ ಸಹಾಯಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ. “

“ರಾಜ್ಯದಲ್ಲಿ ಚಂಡಮಾರುತದ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಗಳ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ತಿರು ಎಡಪ್ಪಡಿ ಕೆ. ಪಳನಿಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದ ಎಲ್ಲಾ ರೀತಿಯ ಸಹಾಯಗಳ ಭರವಸೆ ನೀಡಿದ್ದೇನೆ. ತಮಿಳುನಾಡಿನ ಜನತೆಯ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ”. ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

***