ಪಿಎಂಇಂಡಿಯಾ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಚುನಾವಣಾ ನಿರ್ವಹಣೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಹಕಾರ ಕುರಿತು ಮಾಲ್ಡೀವ್ಸ್ ಚುನಾವಣಾ ಆಯೋಗದೊಂದಿಗೆ ತಿಳುವಳಿಕೆ ಒಪ್ಪಂದ (ಎಂಒಯು) ಮಾಡಿಕೊಳ್ಳುವ ಚುನಾವಣಾ ಆಯೋಗದ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಚುನಾವಣಾ ಪ್ರಕ್ರಿಯೆಯ ಸಾಂಸ್ಥಿಕ ಮತ್ತು ತಾಂತ್ರಿಕ ಅಭಿವೃದ್ಧಿಯ ಕ್ಷೇತ್ರದಲ್ಲಿ ಜ್ಞಾನ ಮತ್ತು ಅನುಭವದ ವಿನಿಮಯ, ಮಾಹಿತಿ ವಿನಿಮಯ, ಸಾಂಸ್ಥಿಕ ಬಲಪಡಿಸುವಿಕೆ ಮತ್ತು ಸಾಮರ್ಥ್ಯ ವೃದ್ಧಿ, ಸಿಬ್ಬಂದಿಗಳ ತರಬೇತಿ, ನಿಯಮಿತ ಸಮಾಲೋಚನೆಗಳನ್ನು ನಡೆಸುವಲ್ಲಿ ಬೆಂಬಲವನ್ನು ಈ ಒಪ್ಪಂದ ಒಳಗೊಂಡಿದೆ.
ಉದ್ದೇಶಿತ ಒಪ್ಪಂದವು ದ್ವಿಪಕ್ಷೀಯ ಸಹಕಾರವನ್ನು ಉತ್ತೇಜಿಸುತ್ತದೆ, ಮಾಲ್ಡೀವ್ಸ್ ಚುನಾವಣಾ ಆಯೋಗಕ್ಕೆ ತಾಂತ್ರಿಕ ನೆರವು, ಸಾಮರ್ಥ್ಯ ವೃದ್ಧಿಗೆ ಬೆಂಬಲವನ್ನು ನೀಡುವ, ಚುನಾವಣಾ ನಿರ್ವಹಣೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಹಕಾರವನ್ನು ರೂಪಿಸುವ ಗುರಿಯನ್ನು ಹೊಂದಿದೆ.