ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು- ಕಾಶ್ಮೀರ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿ ಗೆದ್ದಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಐತಿಹಾಸಿಕ ಜಯವು ತಂಡದ ಅಪಾರ ಹೋರಾಟ ಮನೋಭಾವ, ಶಿಸ್ತು ಮತ್ತು ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇದು ಜಮ್ಮು- ಕಾಶ್ಮೀರ ಜನತೆಗೆ ಹೆಮ್ಮೆಯ ಕ್ಷಣವಾಗಿದ್ದು, ಆ ಪ್ರದೇಶದಲ್ಲಿ ಕ್ರೀಡೆಗೆ ಹೆಚ್ಚುತ್ತಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಇದು ತೋರಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಈ ಸಾಧನೆ ಅನೇಕ ಯುವ ಕ್ರೀಡಾಪಟುಗಳಿಗೆ ದೊಡ್ಡ ಕನಸು ಕಾಣಲು ಮತ್ತು ಹೆಚ್ಚಿನ ಉತ್ಸಾಹದಿಂದ ಆಡಲು ಪ್ರೇರಣೆ ನೀಡಲಿ ಎಂದು ಪ್ರಧಾನಮಂತ್ರಿಗಳು ಆಶಿಸಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
“ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ರಣಜಿ ಟ್ರೋಫಿ ಗೆದ್ದಿರುವುದಕ್ಕೆ ಅಭಿನಂದನೆಗಳು! ಈ ಐತಿಹಾಸಿಕ ಸಾಧನೆ ತಂಡದ ಅಪಾರ ಹೋರಾಟ ಮನೋಭಾವ, ಶಿಸ್ತು ಮತ್ತು ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರ ಜನತೆಗೆ ಹೆಮ್ಮೆಯ ಕ್ಷಣವಾಗಿದ್ದು, ಅಲ್ಲಿ ಕ್ರೀಡೆಗೆ ಹೆಚ್ಚುತ್ತಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಎತ್ತಿಹಿಡಿಯುತ್ತದೆ. ಈ ಸಾಧನೆ ಅನೇಕ ಯುವ ಕ್ರೀಡಾಪಟುಗಳಿಗೆ ದೊಡ್ಡ ಕನಸು ಕಾಣಲು ಮತ್ತು ಇನ್ನಷ್ಟು ಆಡಲು ಪ್ರೇರಣೆ ನೀಡಲಿ.”
*****
Congratulations to the Jammu and Kashmir team for their first ever Ranji Trophy win! This historic triumph reflects remarkable grit, discipline and passion of the team. It is a proud moment for the people of Jammu and Kashmir and it highlights the growing sporting passion and… pic.twitter.com/3fJO89Z5F8
— Narendra Modi (@narendramodi) February 28, 2026