Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜರ್ಮನಿಯ ಚಾನ್ಸೆಲರ್ ಆಗಿ ಅಧಿಕಾರ ಸ್ವೀಕರಿಸಿದ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ 


ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ತಿಳಿಸಿದ್ದಾರೆ;

“ಜರ್ಮನಿಯ ಫೆಡರಲ್ ಚಾನ್ಸೆಲರ್ ಆಗಿ ಅಧಿಕಾರ ವಹಿಸಿಕೊಂಡ @_FriedrichMerz ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಜರ್ಮನಿಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ದೃಢವಾಗಿ ಗಟ್ಟಿಗೊಳಿಸಲು ತಮ್ಮ ಜೊತೆಗೆ ಒಟ್ಟಾಗಿ ಕೆಲಸ ಮಾಡಲು ನಾನು ಅವಕಾಶಗಳನ್ನು ಎದುರು ನೋಡುತ್ತಿದ್ದೇನೆ.”

 

 

*****