ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಮಾನ್ಯ ಫ್ರೆಡ್ರಿಕ್ ಮೆರ್ಜ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಭಾರತ-ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ಪರಾಮರ್ಶಿಸಿದ ಉಭಯ ನಾಯಕರು, ದ್ವಿಪಕ್ಷೀಯ ಬಾಂಧವ್ಯಗಳಲ್ಲಿನ ಸ್ಥಿರ ಆವೇಗದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಭಾರತ ಮತ್ತು ಜರ್ಮನಿ ಈ ವರ್ಷ ತಮ್ಮ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ರಕ್ಷಣೆ, ಆಧುನಿಕ ತಂತ್ರಜ್ಞಾನ ಸೇರಿದಂತೆ ಪ್ರಮುಖ ವಲಯಗಳಲ್ಲಿ ಸಹಕಾರವನ್ನು ಇನ್ನಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಎರಡೂ ದೇಶಗಳ ನಾಯಕರು ಪುನರುಚ್ಚರಿಸಿದರು. ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವು, ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವಲ್ಲಿ ಹಲವು ಹೊಸ ಅವಕಾಶಗಳನ್ನು ತೆರೆಯಲಿವೆ ಎಂದು ಉಭಯರು ಗಮನಸೆಳೆದರು.
ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತು ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಜಾಗತಿಕ ಶಾಂತಿ, ಸ್ಥಿರತೆ ಮತ್ತು ನಿಯಮ-ಆಧಾರಿತ ಅಂತಾರಾಷ್ಟ್ರೀಯ ವ್ಯವಸ್ಥೆಯನ್ನು ಉತ್ತೇಜಿಸಲು ಒಟ್ಟಾಗಿ ನಿಕಟವಾಗಿ ಕಾರ್ಯನಿರ್ವಹಣೆ ಮುಂದುವರಿಸಲು ಅವರು ಸಮ್ಮತಿಸಿದರು. ಸಮಕಾಲೀನ ಜಾಗತಿಕ ಸವಾಲುಗಳನ್ನು ಪರಿಹರಿಸುವಲ್ಲಿ ಬಹುಪಕ್ಷೀಯ ವೇದಿಕೆಗಳಲ್ಲಿ ನಿರಂತರ ಸಹಕಾರದ ಮಹತ್ವವನ್ನೂ ಉಭಯ ನಾಯಕರು ಒತ್ತಿ ಹೇಳಿದರು.
*****
Had a productive conversation with Chancellor Friedrich Merz. We reviewed the growing momentum in the India-Germany Strategic Partnership and discussed ways to unlock new opportunities in trade and investment, defence and advanced technologies. India and Germany will also continue to work closely together to address global challenges and promote peace, stability and a rules-based international order. @_FriedrichMerz @bundeskanzler
— Narendra Modi (@narendramodi) November 24, 2026