Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡೆನ್ಮಾರ್ಕ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಮ್ಯಾಟೆ ಫ್ರೆಡೆರಿಕ್ಸನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಡೆನ್ಮಾರ್ಕ್ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಶ್ರೀಮತಿ ಮ್ಯಾಟೆ ಫ್ರೆಡೆರಿಕ್ಸೆನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಪರಸ್ಪರ ನಂಬಿಕೆ, ಹಂಚಿತ ಮೌಲ್ಯಗಳು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಸಾಮಾನ್ಯ ಬದ್ಧತೆಯ ಮೇಲೆ ಸ್ಥಾಪಿತವಾದ ಶಾಶ್ವತ ಪಾಲುದಾರಿಕೆಯನ್ನು ಭಾರತ ಮತ್ತು ಡೆನ್ಮಾರ್ಕ್ ಹಂಚಿಕೊಂಡಿವೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಭಾರತ – ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನರ ಅನುಕೂಲಕ್ಕಾಗಿ ಈ ಸಹಕಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಪ್ರಧಾನಿ ಫ್ರೆಡೆರಿಕ್ಸೆನ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಡೆನ್ಮಾರ್ಕ್ ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿರುವ ನನ್ನ ಸ್ನೇಹಿತರಾದ ಶ್ರೀಮತಿ ಮ್ಯಾಟೆ ಫ್ರೆಡೆರಿಕ್ಸೆನ್ ಅವರಿಗೆ ಅಭಿನಂದನೆಗಳು.

ಭಾರತ ಮತ್ತು ಡೆನ್ಮಾರ್ಕ್ ಪರಸ್ಪರ ನಂಬಿಕೆ, ಹಂಚಿತ ಮೌಲ್ಯಗಳು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಸಾಮಾನ್ಯ ಬದ್ಧತೆಯ ಮೇಲೆ ಸ್ಥಾಪಿತವಾದ ಶಾಶ್ವತ ಪಾಲುದಾರಿಕೆಯನ್ನು ಹಂಚಿಕೊಂಡಿವೆ. ಭಾರತ-ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಮತ್ತು ನಮ್ಮ ಜನರ ಅನುಕೂಲಕ್ಕಾಗಿ ನಮ್ಮ ಸಹಕಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಪ್ರಧಾನಮಂತ್ರಿ ಫ್ರೆಡೆರಿಕ್ಸೆನ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. 

@Statsmin”

 

*****