Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ದೆಹಲಿಯಲ್ಲಿ ನಡೆದ ಐತಿಹಾಸಿಕ ಕೃತಕ ಬುದ್ಧಿಮತ್ತೆ ಶೃಂಗಸಭೆಯು ಭಾರತದ ಸಾಮರ್ಥ್ಯಗಳಿಗೆ ವ್ಯಾಪಕ ಜಾಗತಿಕ ಮೆಚ್ಚುಗೆಗೆ ಸಾಕ್ಷಿಯಾಯಿತು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಯುವಕರ ದೂರದೃಷ್ಟಿಯ ಮನಸ್ಥಿತಿಯು ಮಾನವೀಯತೆಗೆ ಹೇಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ-

“अविज्ञातस्य विज्ञानं विज्ञातस्य च निश्चयः। आरम्भः कर्मणां शश्वदारब्धस्यान्तदर्शनम्॥”

ಅಜ್ಞಾತ ಜ್ಞಾನವನ್ನು ಕಂಡುಹಿಡಿಯಲು ಪ್ರಯೋಗ ಮತ್ತು ಸಂಶೋಧನೆ ಅತ್ಯಗತ್ಯ ಎಂದು ಸುಭಾಷಿತಂ ತಿಳಿಸುತ್ತದೆ. ತಿಳಿದಿರುವ ಸಂಗತಿಗಳ ತೀರ್ಪು ಮತ್ತು ವಿಶ್ಲೇಷಣೆಯು ಸಂಶೋಧನೆಯ ಆರಂಭವಾಗಿದೆ, ಮತ್ತು ಆ ಜ್ಞಾನವನ್ನು ಅನುಭವ ಮತ್ತು ವೀಕ್ಷಣೆಯ ಮೂಲಕ ಪರಿಶೀಲಿಸಲಾಗುತ್ತದೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“दिल्ली में हुए ऐतिहासिक AI समिट में पूरी दुनिया ने भारत के सामर्थ्य की जमकर सराहना की है। इससे पता चलता है कि टेक्नोलॉजी को लेकर हमारे युवा साथियों की सोच पूरी मानवता के बहुत काम आने वाली है।  

अविज्ञातस्य विज्ञानं विज्ञातस्य च निश्चयः।

आरम्भः कर्मणां शश्वदारब्धस्यान्तदर्शनम् ।।”

 

******