Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಮಿಳುನಾಡಿನ ಮದುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಲು ಕೇಂದ್ರ ಸಚಿವ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ತಮಿಳುನಾಡಿನ ಮದುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಲು ಅನುಮೋದನೆ ನೀಡಿದೆ.

ತಮಿಳುನಾಡಿನ ದೇವಾಲಯಗಳ ನಗರಿ ಮದುರೈನಲ್ಲಿರುವ ಈ ವಿಮಾನ ನಿಲ್ದಾಣವು ರಾಜ್ಯದ ಅತ್ಯಂತ ಹಳೆಯ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ದಕ್ಷಿಣ ತಮಿಳುನಾಡಿಗೆ ಪ್ರಮುಖ ಪ್ರವೇಶ ದ್ವಾರವಾಗಿದ್ದು, ಪ್ರವಾಸೋದ್ಯಮ ಮತ್ತು ತೀರ್ಥಯಾತ್ರೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಆ ಮೂಲಕ ಪ್ರದೇಶದ ಒಟ್ಟಾರೆ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.

ಮದುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದರಿಂದ ಪ್ರಾದೇಶಿಕ ಸಂಪರ್ಕ ಹೆಚ್ಚುತ್ತದೆ, ವ್ಯಾಪಾರಕ್ಕೆ ಉತ್ತೇಜನ ಸಿಗುತ್ತದೆ ಮತ್ತು ಈ ಭಾಗದ ಆರ್ಥಿಕ ಅಭಿವೃದ್ಧಿಗೆ ವೇಗ ದೊರೆಯುತ್ತದೆ. ಅಂತಾರಾಷ್ಟ್ರೀಯ ಯಾತ್ರಿಕರನ್ನು ಮತ್ತು ವ್ಯವಹಾರಗಳನ್ನು ಆಕರ್ಷಿಸುವ ಈ ವಿಮಾನ ನಿಲ್ದಾಣದ ಸಾಮರ್ಥ್ಯವು ನಗರದ ಐತಿಹಾಸಿಕ ಪ್ರಾಮುಖ್ಯತೆಗೆ ಪೂರಕವಾಗಿದೆ.

 

*****