Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತವು ತುಂಬಾ ದುಃಖಕರವಾಗಿದೆ. ತಮ್ಮ ಜನರು ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರ ಆರೋಗ್ಯ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. PM @narendramodi”

 

*****