Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು


ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.

ಸಾಂವಿಧಾನಿಕ ಮೌಲ್ಯಗಳಿಗೆ ರಾಷ್ಟ್ರದ ಬದ್ಧತೆಯನ್ನು ಪುನರುಚ್ಚರಿಸುತ್ತಾ, ಪ್ರಧಾನಮಂತ್ರಿಯವರು, “ಸಂವಿಧಾನವು 140 ಕೋಟಿ ಭಾರತೀಯರ ಆಕಾಂಕ್ಷೆಗಳು, ಹಕ್ಕುಗಳು ಮತ್ತು ಕರ್ತವ್ಯಗಳನ್ನು ಸಾಕಾರಗೊಳಿಸುತ್ತದೆ. ಅದರ ಸ್ಫೂರ್ತಿಯಿಂದ ಮಾರ್ಗದರ್ಶಿಸಲ್ಪಟ್ಟ ಭಾರತವು ತನ್ನ ಪ್ರಜಾಪ್ರಭುತ್ವದ ಅಡಿಪಾಯವನ್ನು ಪ್ರಬಲಪಡಿಸುತ್ತದೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆದರ್ಶಗಳಿಗೆ ಬದ್ಧವಾಗಿರುತ್ತದೆ” ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವ, ಸಂವಿಧಾನ ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಬದ್ಧತೆಯನ್ನು ಪುನರುಚ್ಚರಿಸುವ ಸಂಸ್ಕೃತ ಸುಭಾಷಿತವನ್ನು ಶ್ರೀ ಮೋದಿಯವರು ಹಂಚಿಕೊಂಡರು;

“स्वातन्त्र्यात् सुखमाप्नोति स्वातन्त्र्याल्लभते परम्। 

स्वातन्त्र्यान्निर्वृत्तिं गच्छेत् स्वातन्त्र्यात् परमं पदम् ।।”

ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ;

ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ರಕ್ಷಿಸಿದ ಎಲ್ಲರಿಗೂ ಇಂದು ನಾವು ಗೌರವ ಸಲ್ಲಿಸುತ್ತೇವೆ.

ತುರ್ತು ಪರಿಸ್ಥಿತಿಯು ನಮ್ಮ ಸಂವಿಧಾನದ ಮೇಲಿನ ನೇರ ದಾಳಿಯಾಗಿದ್ದು, ನಾಗರಿಕರ ಸ್ವಾತಂತ್ರ್ಯದ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರ್ಬಂಧ, ರಾಜಕೀಯ ನಾಯಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರ ಬಂಧನಗಳು ಮತ್ತು ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಸಂಸ್ಥೆಗಳ ಮೇಲಿನ ದಾಳಿಗೆ ಇದು ಸಾಕ್ಷಿಯಾಗಿದೆ.

ಅಂತೆಯೇ ಅದೇ ಸಮಯದಲ್ಲಿ, ಮೌನವಾಗಿರದೆ ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯವನ್ನು ಸಹ ಇದು ತಿಳಿಸುತ್ತದೆ.

ನಮ್ಮ ಸಂವಿಧಾನವು 140 ಕೋಟಿ ಭಾರತೀಯರ ಆಕಾಂಕ್ಷೆಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಸಾಕಾರವಾಗಿದೆ. ಇಂತಹ ಪ್ರಬಲ ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ನಮ್ಮ ಸಾಮೂಹಿಕ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ನಮ್ಮ ಸಂವಿಧಾನದ ಚೈತನ್ಯದಿಂದ ಮಾರ್ಗದರ್ಶಿಸಲ್ಪಟ್ಟ ನಾವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಕ್ಕೆ ಸದಾ ಬದ್ಧರಾಗಿರುವ ಭಾರತವನ್ನು ನಿರ್ಮಿಸೋಣ.

#SamvidhanHatyaDiwas

संविधान हत्या दिवस आज हमें उस काले दौर की याद दिला रहा है, जब भारतीय लोकतंत्र को बुरी तरह से कुचला गया था। यह हमें लोकतंत्र, संविधान और नागरिक अधिकारों की रक्षा के लिए हमेशा प्रतिबद्ध रहने को प्रेरित करता है। आपातकाल का विरोध करने वाली सभी विभूतियों को सादर नमन।

स्वातन्त्र्यात् सुखमाप्नोति स्वातन्त्र्याल्लभते परम्। 

स्वातन्त्र्यान्निर्वृत्तिं गच्छेत् स्वातन्त्र्यात् परमं पदम् ।।

#SamvidhanHatyaDiwas

 

*****