ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಮನ್ನಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಆಸ್ಪತ್ರೆಯನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು. ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆ ಕೇಂದ್ರಾಡಳಿತ ಪ್ರದೇಶವಾದ ದಮನ್ ನ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಜನರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವ ನಮ್ಮ ಪ್ರಯತ್ನಗಳ ಭಾಗವಾಗಿ ದಮನ್ನ ನಮೋ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ಇದು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕೇಂದ್ರಾಡಳಿತ ಪ್ರದೇಶ ದಮನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.”
*****
In line with our efforts towards providing quality health treatment to the people, the Namo Hospital at Daman was inaugurated. It has modern facilities and will go a long way in addressing the healthcare needs of the Union Territory and surrounding areas. pic.twitter.com/5lQV5xpEIj
— Narendra Modi (@narendramodi) June 5, 2026