ಪಿಎಂಇಂಡಿಯಾ
ಪ್ರಧಾನಮಂತ್ರಿ ಅವರು ದೆಹಲಿಯ ಪಾಲಂನಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ದೆಹಲಿಯ ಪಾಲಂನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃದಯಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಪ್ರತಿ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;
“ದೆಹಲಿಯ ಪಾಲಂನಲ್ಲಿ ಸಂಭವಿಸಿದ ಅಗ್ನಿ ಅವಘಡ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
ಮೃತರ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ’’
*****
The fire incident in Palam, Delhi, is saddening. I extend my condolences to those who have lost their loved ones. May the injured recover at the earliest.
— PMO India (@PMOIndia) March 18, 2026
An ex-gratia of Rs. 2 lakh from PMNRF would be given to the next of kin of each deceased. The injured would be given Rs.…