Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಇಂದು ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರವೆಂದು ಬಣ್ಣಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸಿದ್ದಾರೆ. ಅವಘಡದಿಂದ ಸಂತ್ರಸ್ತರಾದವರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ಸಮೀಪದ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಪರಿಹಾರಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ರೀತಿಯ ನೆರವು ಒದಗಿಸುತ್ತಿದ್ದಾರೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ಸಮೀಪದ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರಧನ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ನೀಡಲಾಗುವುದು. ಪ್ರಧಾನಮಂತ್ರಿ @narendramodi’’

 

*****