ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ:
“ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ”
*****
The loss of lives due to a fire mishap in Delhi’s Shahdara district is extremely distressing. Condolences to those who have lost their loved ones. Praying for the speedy recovery of the injured.
— PMO India (@PMOIndia) May 3, 2026
An ex-gratia of Rs. 2 lakh from PMNRF would be given to the next of kin of each of…