Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿತದ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿಯವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. 

ಪ್ರಾಧಿಕಾರಗಳು ದುರಂತ ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಘಟನೆಯಿಂದ ಬಾಧಿತರಾದ ಎಲ್ಲರಿಗೂ ನೆರವಾಗುವ ಕಾರ್ಯ ಕೈಗೊಂಡಿವೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದೆ:

“ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪ್ರಾಧಿಕಾರಗಳು ಘಟನಾ ಸ್ಥಳದಲ್ಲಿ ಕಾರ್ಯಪ್ರವೃತ್ತವಾಗಿದ್ದು, ದುರಂತದಿಂದ ಬಾಧಿತರಾದವರಿಗೆ ನೆರವಾಗಿದ್ದಾರೆ: ಪ್ರಧಾನಮಂತ್ರಿ @narendramodi”

 

*****