Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಕೆಲವು ಭಾಗಗಳಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನು ಖಂಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಕೆಲವು ಭಾಗಗಳಲ್ಲಿ ನಡೆದಿರುವ ಹಿಂಸಾಚಾರ ಘಟನೆಗಳನ್ನು ಖಂಡಿಸಿದ್ದಾರೆ.

“ಇಂದು ನಡೆದ ಹಿಂಸಾಚಾರ ಘಟನೆಗಳು ತೀವ್ರ ನೋವು ತಂದಿವೆ. ನಾನು ಈ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಶಾಂತಿ ಕಾಪಾಡುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ.

ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ನಾನು ಎನ್.ಎಸ್.ಎ. ಮತ್ತು ಗೃಹ ಕಾರ್ಯದರ್ಶಿಯವರೊಂದಿಗೆ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದೇನೆ.

ಜನಜೀವನವನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುವಂತೆ ಮತ್ತು ಅಗತ್ಯ ಇರುವ ಎಲ್ಲ ಸಾಧ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.