Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಸಾಮೂಹಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಸೋಮನಾಥ ದೇಗುಲದ ಕಾಲಾತೀತ ಪಾತ್ರವನ್ನು ಸುಭಾಷಿತ ಮೂಲಕ ಪ್ರಧಾನಮಂತ್ರಿ ಅವರು ಸಾರಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪವಿತ್ರ ಸೋಮನಾಥ ದೇವರಿಗೆ ನಮನ ಸಲ್ಲಿಸಿದ್ದಾರೆ. ರಾಷ್ಟ್ರದ ಸಾಮೂಹಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ದೇವಾಲಯದ ಕಾಲಾತೀತ ಪಾತ್ರವನ್ನು ಅವರು ಸುಭಾಷಿತದ ಮೂಲಕ ಸಾರಿದ್ದಾರೆ. 

ಪವಿತ್ರ ಸೋಮನಾಥ ದೇಗುಲವು ಶತಮಾನಗಳಿಂದ ತನ್ನ ದೈವಿಕ ಶಕ್ತಿಯಿಂದ ಪೀಳಿಗೆಗೆ ಸ್ಫೂರ್ತಿ ನೀಡಿದೆ. ಈ ಶಕ್ತಿಯು ನಂಬಿಕೆ, ಧೈರ್ಯ ಮತ್ತು ಸ್ವಾಭಿಮಾನದ ಹಾದಿಯನ್ನು ಬೆಳಗಿಸುತ್ತಲೇ ಇದೆ, ಯುಗಯುಗಾಂತರಗಳಲ್ಲಿ ಭಾರತದ ಜನರಿಗೆ ಮಾರ್ಗದರ್ಶಕ ಬೆಳಕಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನ ಮಂತ್ರಿಯವರು ಹೇಳಿದ್ದಾರೆ. 

ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“पावन-पुनीत सोमनाथ धाम की भव्य विरासत सदियों से जन-जन की चेतना को जागृत करती आ रही है। यहां से निकलने वाली दिव्य ऊर्जा युग-युगांतर तक आस्था, साहस और स्वाभिमान का दीप प्रज्वलित करती रहेगी।

आदिनाथेन शर्वेण सर्वप्राणिहिताय वै।

आद्यतत्त्वान्यथानीयं क्षेत्रमेतन्महाप्रभम्।

प्रभासितं महादेवि यत्र सिद्ध्यन्ति मानवाः॥”

 

*****