Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ 12 ವರ್ಷಗಳ ಸರ್ಕಾರದ ಸಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ


ಕಳೆದ 12 ವರ್ಷಗಳ ಸರ್ಕಾರವು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ, ಯುವಕರು, ಮಹಿಳೆಯರು ಮತ್ತು ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸುವಲ್ಲಿ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಎಂದು ಪ್ರಧಾನಿಯವರು ಹೇಳಿದರು.

ಮೂಲಸೌಕರ್ಯದಿಂದ ಡಿಜಿಟಲ್ ಕ್ರಾಂತಿಯವರೆಗೆ ಇಂದು ದೇಶವು ಪ್ರಪಂಚದಾದ್ಯಂತ ಹೊಸ ಗುರುತನ್ನು ಗಳಿಸಿದೆ ಎಂದು ಶ್ರೀ ಮೋದಿಯವರು ಗಮನಿಸಿದರು. ವಿಕಸಿತ ಭಾರತದ ನಿರ್ಣಯವನ್ನು ಸಾಕಾರಗೊಳಿಸುವಲ್ಲಿ, ಸರ್ಕಾರವು ಸೇವೆ, ಉತ್ತಮ ಆಡಳಿತ ಮತ್ತು ಸಮೃದ್ಧಿಯ ಹಾದಿಯಲ್ಲಿ ಸದಾ ಮುಂದುವರಿಯುತ್ತದೆ ಎಂದು ಪ್ರಧಾನಮಂತ್ರಿಯವರು ದೃಢಪಡಿಸಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“हमारी सरकार के बीते 12 वर्ष विश्वास, विकास और जनकल्याण को समर्पित रहे हैं। 140 करोड़ देशवासियों के आशीर्वाद और राष्ट्र प्रथम की भावना से हमने युवाओं, महिलाओं और अपने किसान भाई-बहनों को सशक्त बनाने में कोई कोर-कसर नहीं छोड़ी है। यह हमारे अथक प्रयासों का ही परिणाम है कि इंफ्रास्ट्रक्चर से लेकर डिजिटल क्रांति तक आज देश को दुनियाभर में एक नई पहचान मिली है। विकसित भारत के संकल्प को साकार करने के लिए हम सेवा, सुशासन और समृद्धि के इसी पथ पर निरंतर आगे बढ़ते रहेंगे।

#12YearsOfSeva”

 

*****