Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಸಿದ ಸಂಭಾಷಣೆ ಉತ್ತಮವಾಗಿತ್ತು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾಗಿ ಹೊಸದಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಸಂಭಾಷಣೆ ನಡೆಸಿದರು. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಗೊಂಡ ಅವರ ಅದ್ಭುತ ವಿಜಯಕ್ಕಾಗಿ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಭಾರತ-ಯು.ಎಸ್. ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಮೋದಿ ಅವರು ಹೇಳಿದರು.

ಎಕ್ಸ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಪೋಸ್ಟ್ ಮಾಡಿದ್ದಾರೆ:

“ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ, ಅವರ ಅದ್ಭುತ ವಿಜಯಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವಾರು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ”

****