Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಸೆಪ್ಟೆಂಬರ್ 12ರಂದು ನವದೆಹಲಿಯಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾದ ಪ್ರಧಾನಮಂತ್ರಿ ಘನತೆವೆತ್ತ ದಾತೋ ಸೆರಿ ಅನ್ವರ್ ಬಿನ್ ಇಬ್ರಾಹಿಂ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ಮೋದಿ ಅವರು ಪ್ರಧಾನಮಂತ್ರಿ ಇಬ್ರಾಹಿಂ ಅವರನ್ನು ಭಾರತಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲುದಾರ ರಾಷ್ಟ್ರವಾಗಿ ಮಲೇಷ್ಯಾ ಭಾಗವಹಿಸಿರುವುದನ್ನು ಶ್ಲಾಘಿಸಿದರು. ಉಭಯ ನಾಯಕರು 2026ರ ಫೆಬ್ರವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಲೇಷ್ಯಾಕ್ಕೆ ಕೈಗೊಂಡಿದ್ದ ಭೇಟಿಯ ಫಲಿತಾಂಶಗಳನ್ನು ಅವಲೋಕಿಸಿದರು; ಜೊತೆಗೆ ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಸೆಮಿಕಂಡಕ್ಟರ್‌, ಮೂಲಸೌಕರ್ಯ, ಡಿಜಿಟಲ್ ಆರ್ಥಿಕತೆ, ಇಂಧನ, ಫಿನ್‌ಟೆಕ್, ಶಿಕ್ಷಣ, ಪ್ರವಾಸೋದ್ಯಮ ಮತ್ತು ಜನರ ನಡುವಿನ ಬಾಂಧವ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು ಪರಾಮರ್ಶಿಸಿದರು. ಸಬಾದ ಕೋಟಾ ಕಿನಬಾಲುವಿನಲ್ಲಿ ಭಾರತದ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಸ್ಥಾಪಿಸಲು ಮಲೇಷ್ಯಾ ತನ್ನ ಒಪ್ಪಿಗೆಯನ್ನು ನೀಡಿರುವುದಾಗಿ ಪ್ರಧಾನ ಮಂತ್ರಿ ಅನ್ವರ್ ಇಬ್ರಾಹಿಂ ತಿಳಿಸಿದರು.

ಆಸಿಯಾನ್ -ಭಾರತ ಸಂಬಂಧಗಳ ಬಲವರ್ಧನೆಗೆ ಮಲೇಷ್ಯಾ ನೀಡುತ್ತಿರುವ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದರು. ಉಭಯ ನಾಯಕರು ಪರಸ್ಪರ ಆಸಕ್ತಿಯ ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಮುನ್ನಡೆಸಲು ಅವರು ತಮ್ಮ ನಿರಂತರ ಬದ್ಧತೆಯನ್ನು ವ್ಯಕ್ತಪಡಿಸಿದರು.

 

*****