Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭ ನೇಪಥ್ಯದಲ್ಲಿ ಇಥಿಯೋಪಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ  ಪ್ರಧಾನಮಂತ್ರಿ

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭ ನೇಪಥ್ಯದಲ್ಲಿ ಇಥಿಯೋಪಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ  ಪ್ರಧಾನಮಂತ್ರಿ


ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿಯ್ ಅಹ್ಮದ್ ಅಲಿ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಗುರಿಯೊಂದಿಗೆ ಚರ್ಚೆ ನಡೆಸಿದರು. ಅವರು ಆರ್ಥಿಕ ಸಹಕಾರ, ರಕ್ಷಣೆ ಮತ್ತು ಭದ್ರತಾ ಪಾಲುದಾರಿಕೆ ಹಾಗೂ ಸಾಮರ್ಥ್ಯ ವರ್ಧನೆಯಂತಹ ಪ್ರಮುಖ ಕ್ಷೇತ್ರಗಳಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು. ಈ ಸಭೆಯು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ ನಲ್ಲಿ ಅಡಿಸ್ ಅಬಾಬಾಗೆ ಕೈಗೊಂಡಿದ್ದ ಐತಿಹಾಸಿಕ ಭೇಟಿಯ ಮುಂದುವರಿದ ಭಾಗವಾಗಿತ್ತು.

ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಬಹುಪಕ್ಷೀಯ ವೇದಿಕೆಗಳಲ್ಲಿ ನಿಕಟ ಸಹಕಾರವನ್ನು ಮುಂದುವರಿಸುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಇಥಿಯೋಪಿಯಾ ಭಾಗವಹಿಸುತ್ತಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು ಮತ್ತು ಅದರ ಉಪಸ್ಥಿತಿಯು ‘ಗ್ಲೋಬಲ್ ಸೌತ್’ನ (ಜಾಗತಿಕ ದಕ್ಷಿಣದ ರಾಷ್ಟ್ರಗಳ) ಸಾಮೂಹಿಕ ಧ್ವನಿಯನ್ನು ಬಲಪಡಿಸಲು ಸಹಾಯ ಮಾಡಿದೆ ಎಂದು ಉಲ್ಲೇಖಿಸಿದರು.

 

*****