Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವೆಂಬರ್ 5 ರಂದು ಏಷ್ಯನ್ ಪ್ಯಾರಾ ಕ್ರೀಡಾಕೂಟ 2026 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026 ರ ನವೆಂಬರ್ 5 ರಂದು ಸಂಜೆ 4:30 ರ ಸುಮಾರಿಗೆ ನವದೆಹಲಿಯ ಇಂದಿರಾಗಾಂಧಿ ಕ್ರೀಡಾ ಸಂಕೀರ್ಣದಲ್ಲಿ, ಏಷ್ಯನ್ ಪ್ಯಾರಾ ಕ್ರೀಡಾಕೂಟ 2026 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಥ್ಲೀಟ್ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜಪಾನ್‌ನ ಐಚಿ-ನಗೋಯಾದಲ್ಲಿ ಈ ವರ್ಷ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತವು ತನ್ನ ಸಾರ್ವಕಾಲಿಕ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಒಟ್ಟು 97 ಭಾರತೀಯ ಪ್ಯಾರಾ-ಕ್ರೀಡಾಪಟುಗಳು 114 ಪದಕಗಳನ್ನು ಗೆದ್ದುಕೊಂಡಿದ್ದು, ಅದರಲ್ಲಿ 30 ಚಿನ್ನ, 35 ಬೆಳ್ಳಿ ಮತ್ತು 49 ಕಂಚಿನ ಪದಕಗಳು ಸೇರಿವೆ.

ಈ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ತರಬೇತುದಾರರು, ಪ್ಯಾರಾಲಿಂಪಿಕ್ ಕಮಿಟಿ ಆಫ್ ಇಂಡಿಯಾ ಹಾಗೂ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್‌ನ ಪದಾಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

 

*****