Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗರಿಕ ವಿಮಾನಯಾನ ಕ್ಷೇತ್ರದ ಸಹಕಾರಕ್ಕಾಗಿ ಭಾರತ ಮತ್ತು ಸ್ಪೇನ್ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕಲು ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಸ್ಪೇನ್ ನಡುವೆ ನಾಗರಿಕ ವಿಮಾನಯಾನ ರಂಗದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ (ಎಂ.ಓ.ಯು.)ಕ್ಕೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದವು, ಭಾರತ ಮತ್ತು ಸ್ಪೇನ್ ನಡುವಿನ ನಾಗರಿಕ ವಿಮಾನಯಾನ ಬಾಂಧವ್ಯದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಮತ್ತು ಇದು ಎರಡೂ ದೇಶಗಳ ನಡುವೆ ಹೆಚ್ಚಿನ ವಾಣಿಜ್ಯ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯದ ಸಾಮರ್ಥ್ಯಕ್ಕೂ ಉತ್ತೇಜನ ನೀಡುತ್ತದೆ.

*****

AKT/VBA/SH