ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀತಿ ಆಯೋಗದ ಪೂರ್ಣಾವಧಿ ಸದಸ್ಯರಾಗಿ ನೇಮಕಗೊಂಡಿರುವ ಡಾ. ಆರ್. ಬಾಲಸುಬ್ರಮಣ್ಯಂ ಮತ್ತು ಡಾ. ಜೋರಾಮ್ ಅನಿಯಾ ಅವರನ್ನು ಅಭಿನಂದಿಸಿದ್ದಾರೆ.
ಅವರ ಶ್ರೀಮಂತ ಅನುಭವ ಮತ್ತು ವಿವಿಧ ವಿಷಯಗಳ ಬಗ್ಗೆ ಆಳವಾದ ತಿಳಿವಳಿಕೆಯು ನೀತಿ ನಿರೂಪಣೆಯನ್ನು ಹೆಚ್ಚು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು. ಅವರ ಕೊಡುಗೆಗಳು ಕ್ಷೇತ್ರಗಳಾದ್ಯಂತ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಶ್ರೀ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಮುಂದಿನ ಅಧಿಕಾರಾವಧಿಯು ಅತ್ಯಂತ ಫಲಪ್ರದ ಮತ್ತು ಪ್ರಭಾವಶಾಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
“ನೀತಿ ಆಯೋಗದ ಪೂರ್ಣಾವಧಿ ಸದಸ್ಯರಾಗಿ ನೇಮಕಗೊಂಡ ಡಾ. ಆರ್. ಬಾಲಸುಬ್ರಮಣ್ಯಂ ಮತ್ತು ಡಾ. ಜೋರಾಮ್ ಅನಿಯಾ ಅವರಿಗೆ ಅಭಿನಂದನೆಗಳು. ಅವರ ಶ್ರೀಮಂತ ಅನುಭವ ಮತ್ತು ವಿವಿಧ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯು ನೀತಿ ನಿರೂಪಣೆಯನ್ನು ಹೆಚ್ಚು ಬಲಪಡಿಸುತ್ತದೆ. ಅವರ ಕೊಡುಗೆಗಳು ಕ್ಷೇತ್ರಗಳಾದ್ಯಂತ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನನಗೆ ವಿಶ್ವಾಸವಿದೆ. ಅವರ ಮುಂದಿನ ಅಧಿಕಾರಾವಧಿಯು ಅತ್ಯಂತ ಫಲಪ್ರದ ಮತ್ತು ಪ್ರಭಾವಶಾಲಿ ಎಂದು ಹಾರೈಸುತ್ತೇನೆ.”
*****
Congratulations to Dr. R. Balasubramaniam Ji and Dr. Joram Aniya Ji on being appointed as Full-time Members of NITI Aayog. Their rich experience and deep understanding of various issues will greatly strengthen policy making. I am confident their contributions will help drive…
— Narendra Modi (@narendramodi) May 2, 2026