Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಮಂತ್ರಿಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ. “ನಿಮ್ಮ ಆಯ್ಕೆಯು ನೇಪಾಳದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಎರಡು ರಾಷ್ಟ್ರಗಳ ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ನೇಪಾಳ ಸ್ನೇಹ ಮತ್ತು ಸಹಕಾರವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ತಿಳಿಸಿದ್ದಾರೆ.

“ನೇಪಾಳದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

“ನಿಮ್ಮ ಆಯ್ಕೆಯು ನೇಪಾಳದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಎರಡು ರಾಷ್ಟ್ರಗಳ ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ನೇಪಾಳ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.’’

@ShahBalen

 

*****