Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ


ನೇಪಾಳದಲ್ಲಿ ಪ್ರವಾಹ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರಧಾನಮಂತ್ರಿ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.

ನೇಪಾಳಕ್ಕೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪುನರುಚ್ಚರಿಸಿರುವ ಅವರು, ಭಾರತೀಯ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೇಪಾಳದ ಪ್ರಾಧಿಕಾರಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ನೇಪಾಳದಲ್ಲಿ ಪ್ರವಾಹದಿಂದ ಉಂಟಾದ ಜೀವಹಾನಿ ಸಂಬಂಧ ಪ್ರಧಾನಮಂತ್ರಿ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವರು.

ನೇಪಾಳಕ್ಕೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಭಾರತ ಸಿದ್ಧವಾಗಿದೆ. ನಮ್ಮ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ.

@PM_nepal_

@ShahBalen

 

 

******