Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಾಟ್ನಾ – ಇಂದೋರ್ ಎಕ್ಸ್ ಪ್ರೆಸ್ ಹಳಿತಪ್ಪಿದ್ದರಿಂದ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಟ್ನಾ – ಇಂದೋರ್ ಎಕ್ಸ್ ಪ್ರೆಸ್ ಹಳಿತಪ್ಪಿ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿಯವರು, “ಪಟ್ನಾ – ಇಂದೋರ್ ಎಕ್ಸ್ ಪ್ರೆಸ್ ಹಳಿ ತಪ್ಪಿ ಉಂಟಾದ ಜೀವ ಹಾನಿಯಿಂದ ಆಘಾತವಾಗಿದ್ದು, ಏನು ಹೇಳಬೇಕೋ ತಿಳಿಯದಾಗಿದೆ. ಸಂತ್ರಸ್ತ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.

ಭೀಕರ ರೈಲು ದುರಂತದಲ್ಲಿ ಮೃತಪಟ್ಟವರೊಂದಿಗೆ ನನ್ನ ಪ್ರಾರ್ಥನೆ ಇದೆ. ನಾನು ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭು ಅವರೊಂದಿಗೆ ಮಾತನಾಡಿದ್ದು, ಅವರು ಪರಿಸ್ಥಿತಿಯ ಬಗ್ಗೆ ಖುದ್ದು ನಿಗಾ ವಹಿಸಿದ್ದಾರೆ”ಎಂದು ತಿಳಿಸಿದ್ದಾರೆ..