Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುರುಷರ ಟ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಚಿತ್ರವೇಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಗ್ಲಾಸ್ಗೊ ಕಾಮನ್ ವೆಲ್ತ್  ಗೇಮ್ಸ್ 2026ರ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಚಿತ್ರವೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರವೀಣ್ ಚಿತ್ರವೇಲ್ ಕೂಡ ತಮ್ಮ ಕ್ರೀಡಾ ವೃತ್ತಿಜೀವನದ ಅತ್ಯುತ್ತಮ ಜಿಗಿತವನ್ನು ದಾಖಲಿಸಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.
ಈ ಸಾಧನೆಗಾಗಿ ಶ್ರೀ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು ಮತ್ತು ಅವರ ಮುಂದಿನ ಪ್ರಯತ್ನಗಳಲ್ಲಿ ಯಶಸ್ಸನ್ನು ಹಾರೈಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಪ್ರವೀಣ್ ಚಿತ್ರವೇಲ್ ಅವರು 2026 ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಮತ್ತು ಅವರ ಕ್ರೀಡಾ ಪ್ರಯಾಣದ ಅತ್ಯುತ್ತಮ ಜಿಗಿತವನ್ನು ದಾಖಲಿಸಿರುವುದು ಸಂತಸ ತಂದಿದೆ. ಅವರಿಗೆ ಅಭಿನಂದನೆಗಳು. ಮುಂದಿನ ಪ್ರಯಾಣದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.

#CWG2026″

 

*****