ಪಿಎಂಇಂಡಿಯಾ
ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಗಮನಾರ್ಹ ಪ್ರದರ್ಶನದೊಂದಿಗೆ ಗುಲ್ವೀರ್ ಸಿಂಗ್ ಒಂದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಅಥ್ಲೆಟಿಕ್ಸ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಪ್ರಧಾನಿ ಹೇಳಿದರು. ಗುಲ್ವೀರ್ ಸಿಂಗ್ ಅವರು ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀಟರ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಅವರು ಹೇಳಿದರು.
ಈ ಸಾಧನೆಯನ್ನು ಭಾರತೀಯ ಅಥ್ಲೆಟಿಕ್ಸ್ ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಬಣ್ಣಿಸಿದ ಶ್ರೀ ನರೇಂದ್ರ ಮೋದಿ ಅವರು ಗುಲ್ವೀರ್ ಸಿಂಗ್ ಅವರಿಗೆ ಶುಭ ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ;
“ಗುಲ್ವೀರ್ ಸಿಂಗ್ ನಿರ್ಮಿಸಿದ ಇತಿಹಾಸ! ಅವರು 2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಈ ಗಮನಾರ್ಹ ಪ್ರದರ್ಶನದೊಂದಿಗೆ, ಅವರು ಒಂದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಅಥ್ಲೆಟಿಕ್ಸ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಾಮನ್ ವೆಲ್ತ್ ಗೇಮ್ಸ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ನಿಜಕ್ಕೂ ಭಾರತೀಯ ಅಥ್ಲೆಟಿಕ್ಸ್ ಗೆ ಒಂದು ಹೆಗ್ಗುರುತಿನ ಸಾಧನೆಯಾಗಿದೆ. ಅವರಿಗೆ ನನ್ನ ಶುಭ ಹಾರೈಕೆಗಳು.
#CWG2026″
*****
History made by Gulveer Singh! He wins the Bronze Medal in the Men's 5000 m event at the Commonwealth Games 2026. Congratulations to him. With this remarkable performance, he became the first Indian athlete to win two athletics medals at a single Commonwealth Games. He is also… pic.twitter.com/nFC2oCvP7F
— Narendra Modi (@narendramodi) August 2, 2026