ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಧ್ಯಾತ್ಮಿಕ ನಾಯಕರಾದ ಶ್ರೀ ಶ್ರೀ ರವಿಶಂಕರ್ ಅವರನ್ನು ಭೇಟಿ ಮಾಡಿದರು.
ಶ್ರೀ ಶ್ರೀ ರವಿಶಂಕರ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು, ವಿಶೇಷವಾಗಿ ಆರ್ಟ್ ಆಫ್ ಲಿವಿಂಗ್ ಕೈಗೊಂಡಿರುವ ಕಾರ್ಯಗಳ ಕುರಿತು ಅತ್ಯುತ್ತಮ ಚರ್ಚೆ ನಡೆಸಿದುದಾಗಿ ಶ್ರೀ ಮೋದಿ ಅವರು ಹೇಳಿದ್ದಾರೆ.
ಸಾಮಾಜಿಕ ಒಳಿತನ್ನು ವರ್ಧಿಸುವ ನಿಟ್ಟಿನಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ವಿವಿಧ ಉಪಕ್ರಮಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಸಂಸ್ಥೆಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:
“ಆರ್ಟ್ ಆಫ್ ಲಿವಿಂಗ್ ನಲ್ಲಿ ಶ್ರೀ ಶ್ರೀ ರವಿಶಂಕರ್ ಅವರನ್ನು ಭೇಟಿಯಾದೆ. ಆರ್ಟ್ ಆಫ್ ಲಿವಿಂಗ್ ನ ಕೆಲಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಅತ್ಯುತ್ತಮ ಚರ್ಚೆ ನಡೆಸಿದೆವು. ಸಾಮಾಜಿಕ ಒಳಿತನ್ನು ಹೆಚ್ಚಿಸುವತ್ತ ಅವರ ಒಲವು ಗಮನಾರ್ಹವಾದುದು.
@ArtofLiving
@Gurudev”
*****
While at Art of Living, met Sri Sri Ravi Shankar Ji. We had an excellent discussion on various subjects, notably the work of Art of Living. His passion towards furthering societal good is noteworthy.@ArtofLiving@Gurudev pic.twitter.com/c9vah6mXeO
— Narendra Modi (@narendramodi) May 10, 2026