ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ ದಮನ್ ನ ನಮೋ ವಿಮಾನ ನಿಲ್ದಾಣದಲ್ಲಿ ಆಧುನಿಕ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು.
ಈ ಹೊಸ ಸೌಲಭ್ಯವು ಕೇಂದ್ರಾಡಳಿತ ಪ್ರದೇಶದ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಲಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಟರ್ಮಿನಲ್ ಕಟ್ಟಡವು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಗಮನಾರ್ಹವಾಗಿ ಉತ್ತೇಜಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ದಮನ್ ನ ನಮೋ ವಿಮಾನ ನಿಲ್ದಾಣದ ಆಧುನಿಕ ಟರ್ಮಿನಲ್ ಕಟ್ಟಡವು ಈ ಕೇಂದ್ರಾಡಳಿತ ಪ್ರದೇಶದ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪೂರೈಸಲಿದೆ. ಇದು ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ಇಂದು ಸಂಜೆ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದುದು ಹರ್ಷದಾಯಕ.”
*****
Daman’s Namo Airport gets a modern terminal building that will cater to the growing infrastructure needs of this Union Territory. It will boost tourism and commercial activities. Glad to have inaugurated the terminal building earlier this evening. pic.twitter.com/LJXZLH2TFk
— Narendra Modi (@narendramodi) June 5, 2026