Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾದ ಉಪ ಪ್ರಧಾನಮಂತ್ರಿ ಡಿಮಿಟ್ರಿ ಪಟ್ರುಶೆವ್

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾದ ಉಪ ಪ್ರಧಾನಮಂತ್ರಿ ಡಿಮಿಟ್ರಿ ಪಟ್ರುಶೆವ್


ರಷ್ಯಾ ಒಕ್ಕೂಟದ ಉಪ ಪ್ರಧಾನಮಂತ್ರಿ ಘನತೆವೆತ್ತ ಡಿಮಿಟ್ರಿ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕೃಷಿ, ರಸಗೊಬ್ಬರ, ಆಹಾರ ಸಂಸ್ಕರಣೆ ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಪುಟಿನ್ ಅವರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು ಮತ್ತು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

 

*****