ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೂದ್ ಪೆಜೆಷ್ಕಿಯಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಅಧ್ಯಕ್ಷರಾದ ಪೆಜೆಷ್ಕಿಯನ್ ಅವರು ಇರಾನ್ ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಅವರಿಗೆ ವಿವರಿಸಿದರು ಮತ್ತು ಈ ಪ್ರದೇಶದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು.
ಈ ಪ್ರದೇಶದಲ್ಲಿ ಹೊರಹೊಮ್ಮುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂಬ ಭಾರತದ ಸ್ಥಿರ ನಿಲುವನ್ನು ಪುನರುಚ್ಚರಿಸಿದರು.
ಇರಾನ್ ಸೇರಿದಂತೆ ಈ ಪ್ರದೇಶದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದಂತೆ ಭಾರತದ ಆದ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ, ಇಂಧನ ಮತ್ತು ಸರಕುಗಳ ಅಡೆತಡೆಯಿಲ್ಲದ ಸಾಗಣೆಯ ಮಹತ್ವವನ್ನು ಪ್ರತಿಪಾದಿಸಿದರು.
ಬಳಿಕ ಉಭಯ ನಾಯಕರು ಸಂಪರ್ಕದಲ್ಲಿರಲು ಪರಸ್ಪ ಒಪ್ಪಿಕೊಂಡರು.
*****
Had a conversation with Iranian President, Dr. Masoud Pezeshkian, to discuss the serious situation in the region.
— Narendra Modi (@narendramodi) March 12, 2026
Expressed deep concern over the escalation of tensions and the loss of civilian lives as well as damage to civilian infrastructure.
The safety and security of…