Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್‌ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್‌ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಉಭಯ ನಾಯಕರು ಭಾರತ-ಇಸ್ರೇಲ್ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ನಿರಂತರ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಉಭಯ ದೇಶಗಳ ಪರಸ್ಪರ ಪ್ರಯೋಜನಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ನೆತನ್ಯಾಹು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಇದೇ ವೇಳೆ ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

******